ಸೆ.29ರ ಬಂದ್ ಗೆ ಎಲ್ಲರೂ ಸಹಕರಿಸಿ- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ. ಬೆಂಗಳೂರು,ಸೆಪ್ಟೆಂಬರ್​ ,27,2023(..):ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಸೆಪ್ಟಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ರಾಜ್ಯದ ಎಲ್ಲರೂ ಸಹಕಾರ ನೀಡಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದರು. ಈ ಕುರಿತು ಮಾತನಾಡಿದ ವಾಟಾಳ್ ನಾಗರಾಜ್, ಸೆಪ್ಟೆಂಬರ್​ 29ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ರಾಜ್ಯ ಬಂದ್​ ಗೆ ಎಲ್ಲರೂ ಸಹಕಾರ ನೀಡಬೇಕು. ಹೋಟೆಲ್​, ಶಾಪಿಂಗ್ ಮಾಲ್​ಗಳು, ಅಂಗಡಿಗಳು ಬಂದ್​​​ ಮಾಡಬೇಕು. ಕರ್ನಾಟಕ ಬಂದ್​ಗೆ ಎಲ್ಲ ಸಂಘಟನೆಗಳು ಬೆಂಬಲ ನೀಡಿವೆ ಎಂದು ತಿಳಿಸಿದರು. ರಾಜ್ಯದ ಜನರಿಗಾಗಿ ನಾವು ಅನೇಕ ಬಂದ್ ​ಗೆ ಬೆಂಬಲ ನೀಡಿದ್ದೇವೆ. ಸೆಪ್ಟೆಂಬರ್ 29ರ ಕರ್ನಾಟಕ ಬಂದ್ ಬಹಳ ಮುಖ್ಯವಾದದ್ದು. ಈ ಬಂದ್ ಒಂದು ಜಿಲ್ಲೆಗೆ ಮಾತ್ರ ಸೀಮಿತಲ್ಲ, ಕರ್ನಾಟಕದಾದ್ಯಂತ ಬಂದ್​ ನಡೆಯಲಿದೆ. ಟೋಲ್​, ರೈಲು, ಹೆದ್ದಾರಿ, ವಿಮಾನ ಹಾರಾಟ ಬಂದ್ ಆಗಲಿದೆ. ಟೌನ್​ಹಾಲ್ ​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. : - – 29- -