ಉದ್ಯಮಿಗೆ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ. ಬೆಂಗಳೂರು,ಸೆಪ್ಟಂಬರ್,23,2023(..):ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿ 7 ಮಂದಿ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ , ಹಾಲಶ್ರೀಯನ್ನ ಸೇರಿ 8 ಆರೋಪಿಗಳನನ್ನ ಬಂಧಿಸಿದ್ದಾರೆ ಎನ್ನಲಾಗಿದೆ. ಆರೋಪಿಗಳನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಇಂದು ಚೈತ್ರಾ ಕುಂದಾಪುರ, ಗಗನ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಸೇರಿ 7 ಆರೋಪಿಗಳನ್ನ ಅಕ್ಟೋಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. : - –-7 – .