ಕರ್ನಾಟಕದ ಪಾಲಿಗೆ ಇನ್ನು ಜಾತ್ಯಾತೀತ ತತ್ವದ ಜೆಡಿಎಸ್ ಮುಗಿದ ಅಧ್ಯಾಯ- ರಾಜ್ಯ ಕಾಂಗ್ರೆಸ್ ಟ್ವೀಟ್. ಬೆಂಗಳೂರು,ಸೆಪ್ಟಂಬರ್,23,2023(..):ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ರಾಜ್ಯ ಕಾಂಗ್ರೆಸ್ ಘಟಕ ಲೇವಡಿ ಮಾಡಿದೆ. ನಿನ್ನೆ ಅಧಿಕೃತವಾಗಿ ಎನ್ ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗಿದ್ದು ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಬಿಜೆಪಿ ಸಂವಿಧಾನದ ಪೀಠಿಕೆಯಿಂದ ಜಾತ್ಯಾತೀತತೆಯನ್ನು ಕಿತ್ತು ಹಾಕಿದೆ. ಜೆಡಿಎಸ್ ತನ್ನ ಹೆಸರಿನಲ್ಲಿದ್ದ ಜಾತ್ಯಾತೀತತೆಯನ್ನು ಅನಧಿಕೃತವಾಗಿ ಕಿತ್ತು ಹಾಕಿದೆ. ಜೆಡಿಎಸ್​ನಲ್ಲಿನ ಅಲ್ಪಸಂಖ್ಯಾತ ಮುಖಂಡರು ಪಕ್ಷದ ಹೊಸಿಲಿನ ಹೊರಗೆ ಕಾಲಿಟ್ಟಿದ್ದಾರೆ, ಜೆಡಿಎಸ್ ಪಕ್ಷವನ್ನು ಮುಗಿಸಲೆಂದೇ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯ ಕನಸು ನನಸಾಗುವ ಕಾಲ ಬಂದಿದೆ. ಕರ್ನಾಟಕದ ಪಾಲಿಗೆ ಇನ್ನು ಜಾತ್ಯಾತೀತ ತತ್ವದ ಜೆಡಿಎಸ್ ಮುಗಿದ ಅಧ್ಯಾಯ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. : - –---