ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾದ್ರೆ ಅದಕ್ಕೆ ಸರ್ಕಾರವೇ ಹೊಣೆ- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು ಸೆಪ್ಟಂಬರ್,.23,2023(..):ರಾಜ್ಯದಲ್ಲಿ ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಪರಿಸ್ಥಿತಿ ಇದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾದ್ರೆ ಅದಕ್ಕೆ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದರು. ಕರ್ನಾಟಕದ ನೆಲ, ಜಲ ರಕ್ಷಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾವೇರಿ ನದಿ ನೀರು ಸಂರಕ್ಷಣೆ ಮಾಡುವಲ್ಲೂ ಸರ್ಕಾರ ಎಡವಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೀರಿಗೆ ಹಾಹಾಕಾರವಾದರೆ ಸಿಎಂ ಸಿದ್ದರಾಮಯ್ಯ ಹೊಣೆ. ಬೆಂಗಳೂರಿಗೆ ಕುಡಿಯುವ ನೀರಿಲ್ಲ. ಇದನ್ನು ಕೋರ್ಟ್ ​ಗೆ ಹೇಳಿಲ್ಲ ಎಂದು ಕಿಡಿಕಾರಿದರು. ಕಾವೇರಿ ನೀರಿಗಾಗಿ ರಾಜ್ಯಾದ್ಯಂತ ಬಿಜೆಪಿ ಹೋರಾಟ. ಕೂಡಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವ ನಿರ್ಧಾರವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ಮಾಡಲಿದೆ. ರಾಜ್ಯವನ್ನು ಆಳುವ ನೈತಿಕತೆ ಸರ್ಕಾರಕ್ಕೆ ಇಲ್ಲ. ಕಾವೇರಿ ಹೋರಾಟವನ್ನು ಯಾರೇ ಮಾಡಿದರೂ ಅದಕ್ಕೆ ಬಿಜೆಪಿ ಬೆಂಬಲ ಕೊಡುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ ತಿಳಿಸಿದರು. : - – - - .