ಕಾವೇರಿ ನದಿ ವಿಚಾರದಲ್ಲಿ ಕೇಂದ್ರ ಎಲ್ಲ ರೀತಿಯ ಸಹಕಾರ ನೀಡಿದೆ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಹುಬ್ಬಳ್ಳಿ,ಸೆಪ್ಟಂಬರ್,23,2023(..):ಕಾವೇರಿ ನದಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾವೇರಿ ನದಿ ವಿಚಾರದಲ್ಲಿ ರಾಜ್ಯ ಸರ್ಕಾರ ಸೂಕ್ತ ವಾದ ಮಂಡಿಸಿಲ್ಲ. ಸರ್ಕಾರ ನಮ್ಮ ಹಾಗೂ ತಮಿಳುನಾಡು ಡ್ಯಾಮ್ ​ಗಳ ಮಾಹಿತಿ ಪಡೆಯಬೇಕಿತ್ತು. ಆದರೆ ಸರ್ಕಾರ ಎರಡೂ ರಾಜ್ಯಗಳ ಡ್ಯಾಮ್​​​​​​ ಗಳ ಸ್ಥಿತಿ ಬಗ್ಗೆ ಸೂಕ್ತ ವಾದ ಮಂಡಿಸಿಲ್ಲ. ಕಾವೇರಿ ಪ್ರಾಧಿಕಾರದ ಸಭೆಗೆ ನಮ್ಮವರು ವರ್ಚುವಲ್​ ಮೂಲಕ ಹಾಜರಾಗಿದ್ದರು. ಕಾವೇರಿ ನದಿ ವಿಚಾರದಲ್ಲಿ ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡಿದ್ದೇವೆ. ಮುಂದೆಯೂ ಸಹಕಾರ ನೀಡುತ್ತೇವೆ ಎಂದು ಹೇಳಿದರು. : – – – - -