ಜೆಡಿಎಸ್- ಬಿಜೆಪಿ ಮೈತ್ರಿ ವಿಚಾರ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ.. ಚನ್ನಪಟ್ಟಣ,ಸೆಪ್ಟಂಬರ್,20,2023(..):ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಸದ್ದು ಮಾಡುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್- ಬಿಜೆಪಿ ಮೈತ್ರಿ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಸಭೆ ಇದೆ. ಸಭೆಯಲ್ಲಿ ಚರ್ಚಿಸಿದ ಬಳಿಕ ಇದರ ವಾಸ್ತವಾಂಶ ಹೊರಗೆ ಬರುತ್ತದೆ. ಸೀಟು ಹೊಂದಾಣಿಕೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೆಟ್ಟದಾಗಿ ನಡೆದುಕೊಂಡಿದೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಬಲಾಢ್ಯ ಆಗಿರಬೇಕು. ಈ ನಿಟ್ಟಿನಲ್ಲಿ ನಾಳೆ ಚರ್ಚೆಯಾಗಲಿದೆ ಎಂದು ಹೆಚ್.ಡಿಕೆ ತಿಳಿಸಿದರು. : - - – - – - .