ಮಹಿಳಾ ಮೀಸಲಾತಿ ಬಿಲ್ ಗೆ ಕಾಂಗ್ರೆಸ್ ಬೆಂಬಲ ಇದೆ- ಸೋನಿಯಾ ಗಾಂಧಿ. ನವದೆಹಲಿ,ಸೆಪ್ಟಂಬರ್,20,2023(..):ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಬೆಂಬಲ ಇದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ಲೋಕಸಭೆಯಲ್ಲಿ ಇಂದು ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆ ಪ್ರಾರಂಭವಾಗಿದ್ದು, ಈ ವೇಳೆ ಮಾತನಾಡಿದ ಸೋನಿಯಾ ಗಾಂಧಿ ಅವರು, “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ, ನಾನು ನಾರಿ ಶಕ್ತಿ ವಂದನ್ ಅಧಿನಿಯಮ್ 2023 ರ ಬೆಂಬಲಕ್ಕೆ ನಿಂತಿದ್ದೇನೆ. ಇದರಿಂದ ಒಬಿಸಿ, ಎಸ್ ಸಿ, ಎಸ್ಟಿ ಮಹಿಳೆಯರಿಗೆ ನ್ಯಾಯ ಸಿಗಲಿದೆ ಎಂದರು. ರಾಜೀವ್ ಗಾಂಧಿ ಕಂಡಿದ್ದ ಕನಸು ಪೂರ್ಣಗೊಂಡಿದೆ. ಈ ಬಿಲ್ ಗಾಗಿ 13 ವರ್ಷಗಳಿಂದ ಮಹಿಳೆಯರು ಕಾಯುತ್ತಿದ್ದರು. ಎಸ್‌ಸಿ, ಎಸ್‌ಟಿ, ಒಬಿಸಿಗಳಿಗೆ ಉಪ ಕೋಟಾದೊಂದಿಗೆ ಮಹಿಳಾ ಕೋಟಾ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದರು. ಹಾಗೆಯೇ ಕೂಡಲೇ ಕೇಂದ್ರ ಸರ್ಕಾರ ಜನಗಣತಿ ಆರಂಭಿಸಬೇಕು ಎಂದು ಸೋನಿಯಾ ಗಾಂಧಿ ಆಗ್ರಹಿಸಿದರು. : – – ’- - - - .