ಕಾವೇರಿ ನೀರು ವಿವಾದ; ರಾಜ್ಯದ ಜನಪ್ರತಿನಿಧಿಗಳು, ಕಾನೂನು ತಜ್ಞರ ಜೊತೆ ಸಿಎಂ ಸಿದ್ಧರಾಮಯ್ಯ ಸಭೆ, ಚರ್ಚೆ. ನವದೆಹಲಿ,ಸೆಪ್ಟಂಬರ್,20,2023(..):ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಹಿನ್ನೆಲೆ ಈ ಕುರಿತು ರಾಜ್ಯದ ಜನಪ್ರತಿನಿಧಿಗಳು ಮತ್ತು ಕಾನೂನು ತಜ್ಞರ ಜೊತೆ ದೆಹಲಿಯ ಖಾಸಗಿ ಹೋಟೆಲ್​ನಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ಸಂಸದರು, ಕೇಂದ್ರ ಸಚಿವರು, ರಾಜ್ಯ ಸಚಿವರು ಸೇರಿ ಹಲವರು ಭಾಗಿಯಾಗಿದ್ದಾರೆ. ಕಾವೇರಿ ನದಿ ನೀರು ಕುರಿತು ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಚರ್ಚೆಸಲಾಗುತ್ತಿದೆ. ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ವಿರುದ್ದ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. : - –- - -