ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ: ಸಚಿವರು ಸಾಥ್ ಮೈಸೂರು,ಸೆಪ್ಟಂಬರ್,3,2024 (..):ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಚಾಮುಂಡಿ ಬೆಟ್ಟಕ್ಕೆ ಕಾರಿನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಹಣೆಗೆ ಅರ್ಚಕರು ಕುಂಕುಮವಿಟ್ಟರು. ನಂತರ ತಾಯಿ ಚಾಮುಂಡೇಶ್ವರಿ ಪಾದುಕೆಗೆ ನಮಸ್ಕರಿಸಿದ ಸಿಎಂ ಸಿದ್ದರಾಮಯ್ಯ ನಂತರ ಈಡುಗಾಯಿ ಒಡೆದರು. ಇನ್ನೂ ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಸಚಿವರಾದ ವೆಂಕಟೇಶ್, ರಾಮಲಿಂಗರೆಡ್ಡಿ, ಶಾಸಕ ರವಿ ಶಂಕರ್ ಉಪಸ್ಥಿತರಿದ್ದರು. : , , ,