ಮೂರು ಡಿಸಿಎಂ ಹುದ್ದೆ ಸೃಷ್ಠಿ ವಿಚಾರ ಹೈಕಮಾಂಡ್ ಮುಂದೆ ಇಲ್ಲ- ಸಚಿವ ಪ್ರಿಯಾಂಕ್ ಖರ್ಗೆ. ಕಲಬುರಗಿ,ಸೆಪ್ಟಂಬರ್,16,2023(..):ಲೋಕಸಭಾ ಚುನಾವಣೆ ಗೆಲ್ಲಬೇಕಾದರೇ ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಠಿಸಬೇಕು ಎಂದು ಸಚಿವ ಕೆ.ಎನ್ ರಾಜಣ್ಣ ಆಗ್ರಹಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಮೂರು ಡಿಸಿಎಂ ಹುದ್ದೆ ಸೃಷ್ಠಿ ವಿಚಾರ ಹೈಕಮಾಂಡ್ ಮುಂದೆ ಇಲ್ಲ ಎಂದಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಮೂರು ಜನ ಡಿಸಿಎಂಗಳನ್ನು ಮಾಡಬೇಕು ಎಂಬ ಹೇಳಿಕೆ ಅದು ರಾಜಣ್ಣ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಎಲ್ಲರಿಗೂ ಹೈಕಮಾಂಡ್ ಮುಂದೆ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ. ಹೀಗಾಗಿ, ಮೂವರು ಡಿಸಿಎಂ ಅಂತಾದರೂ ಹೇಳಲಿ ಐವರು ಡಿಸಿಎಂ ಅಂತಾದರೂ ಹೇಳಲಿ, ಅದು ಅವರಿಗೆ ಬಿಟ್ಟದ್ದು. ಆದರೆ, ಹೈಕಮಾಂಡ್ ಮುಂದೆ ಇಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟನೆ ನೀಡಿದರು. : – - - – – - -