ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ- ಸಚಿವ ಚಲುವರಾಯಸ್ವಾಮಿ ಟೀಕೆ. ಬೆಂಗಳೂರು,ಸೆಪ್ಟಂಬರ್,15,2023(..):ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ಮುಂದಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಟೀಕಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಅನಿವಾರ್ಯವಾಗಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿಗೆ ಮುಂದಾಗಿದೆ. ಜೆಡಿಎಸ್ ಗೆ ಬಿಜೆಪಿ ಬಿಜಿಪಿಗೆ ಜೆಡಿಎಸ್ ಅನಿವಾರ್ಯ ಪಕ್ಷದ ಅಸ್ತಿತ್ವಕ್ಕಾಗಿ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಲೇವಡಿ ಮಾಡಿದರು. ಕಾವೇರಿ ವಿವಾದ ಕುರಿತು ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದಲ್ಲಿ ಸರ್ಕಾರ ಇದೆ. ಸರ್ವಪಕ್ಷ ಸಭೆಗೆ ಬಿಜೆಪಿ ನಾಯಕರು ಬಂದಿಲ್ಲ. ಬಿಜೆಪಿ ನಾಯಕರಿಗೆ ಮೋದಿ ಕಂಡರೆ ಭಯ. ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಬಳಿ ನಿಯೋಗ ಕರೆದೊಯ್ಯಲು ಆಗುತ್ತಿಲ್ಲ ಎಂದು ಕಿಡಿಕಾರಿದರು. : - - – – - -