ತಮಿಳುನಾಡು ಬಸ್ ಗಳ ಮೇಲೆ ಕಲ್ಲು ತೂರಾಟ: ಎಫ್ ಐಆರ್ ದಾಖಲು. ಬೆಂಗಳೂರು, ಸೆಪ್ಟಂಬರ್,12,2023(..):ತಮಿಳುನಾಡು ಬಸ್ ಗಳ ಮೇಲೆ ಕಲ್ಲು ತೂರಾಟವಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಸ್ಯಾಟ್​ ಲೈಟ್ ಸಮೀಪ‌ದ ಭಾರತ್ ಪೆಟ್ರೋಲ್ ಬಂಕ್ ಬಳಿ ತಮಿಳುನಾಡು ಸಾರಿಗೆ ಬಸ್ ​ಗಳ ಮೇಲೆ ಕಲ್ಲು ತೂರಾಟವಾಗಿದೆ. ನಿನ್ನೆ ಮಧ್ಯರಾತ್ರಿ ತಮಿಳುನಾಡಿಗೆ ಸೇರಿದ 4 ಬಸ್​ಗಳ​ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಈ ಕುರಿತು ಬಸ್ ಚಾಲಕ ಗುಣಶೇಖರನ್ ದೂರಿ ಚಾಮರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಚಾಮರಾಜಪೇಟೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. : - - - -.