ಬೆಂಗಳೂರಿನಲ್ಲಿ ಡೆಂಗ್ಯೂ ಹೆಚ್ಚಳ ಹಿನ್ನೆಲೆ: ಕಟ್ಟುನಿಟ್ಟಿನ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ. ಬೆಂಗಳೂರು,ಸೆಪ್ಟಂಬರ್,7,2023(..):ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದರು. ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡೆಂಗ್ಯೂ ಪ್ರಕರಣಗಳ ತಡೆ ಹಾಗೂ ಇನ್ನಿತರೆ ಆರೋಗ್ಯ ವಿಷಯದ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ರಾಜ್ಯ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವ ಯಾವ ಭಾಗದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಿದೆ ಎನ್ನುವ ಮಾಹಿತಿಯನ್ನು ಪಡೆದರು. ಕಳೆದ ಮೂರು ವರ್ಷ ಹೋಲಿಕೆ ಮಾಡಿದ್ರೆ ಈ ಭಾರಿಯೇ ಅತ್ಯಧಿಕ ಡೆಂಗ್ಯೂ ಪ್ರಕರಣಗಳು ದಾಖಲಾಗುತ್ತಿವೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೋಲಿಕೆ ಮಾಡಿದರೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಡೆಂಗ್ಯೂ ಹೀಗೆ ದಿಢೀರ್ ಹೆಚ್ಚಾಗಲು ಕಾರಣವೇನು ಎಂಬ ಬಗ್ಗೆ ಮಾಹಿತಿ ಪಡೆದು ಡೆಂಗ್ಯೂ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚಿಸಿದರು. : - – - - -