ಕಾಂಗ್ರೆಸ್ ಗೆ ಬಿಜೆಪಿ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಸೇರ್ಪಡೆ. ಬೆಂಗಳೂರು,ಸೆಪ್ಟಂಬರ್,8,2023(..): ಬಿಜೆಪಿ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಇದೀಗ ಕಾಂಗ್ರೆಸ್ ಸೇರಿದ್ದಾರೆ. ಈ ಕುರಿತು ಮಾತನಾಡಿದ ಸುಕುಮಾರ್ ಶೆಟ್ಟಿ, ಬೆಳೆಯುವವರನ್ನು ಭಾರತೀಯ ಜನತಾ ಪಕ್ಷದಲ್ಲಿ ಬಿಡುವುದಿಲ್ಲ, ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಕಳೆದ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡದೆ ಅನ್ಯಾಯ ಮಾಡಿದ್ದಾರೆ. ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇಡುತ್ತಿದ್ದೇನೆ ಎಂದರು. : - - - .