ಮೆಡಿಕಲ್ ಕಾಲೇಜು ಸ್ಥಳಾಂತರ ಹಿನ್ನೆಲೆ: ರಾಮನಗರ ಬಂದ್ ಗೆ ಕರೆ. ರಾಮನಗರ,ಸೆಪ್ಟಂಬರ್,8,2023(..):ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಕನಕಪುರಕ್ಕೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ರಾಮನಗರ ಬಂದ್ ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಇಂದು ರಾಮನಗರ ಬಂದ್​​ಗೆ ಕರೆ ನೀಡಿದ್ದಿ, ಐಜೂರು ವೃತ್ತದಲ್ಲಿ ಪ್ರತಿಭಟನೆ ಪ್ರಾರಂಭವಾಗಿದೆ. ಪ್ರತಿಭಟನೆಯಲ್ಲಿ ಜೆಡಿಎಸ್, ಬಿಜೆಪಿ ಕನ್ನಡಪರ ಸಂಘಟನೆಗಳ ಸದಸ್ಯರು ಭಾಗಿಯಾಗಲಿದ್ದಾರೆ. ಸ್ಥಳದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ ಇದೆ. ವಿವಿಧ ಸಂಘಟನೆಗಳು ಬಂದ್​ಗೆ ಕರೆ ನೀಡಿದ್ದು, ಎಪಿಎಂಸಿ ಸಂಪೂರ್ಣ ಸ್ತಬ್ಧವಾಗಿದೆ. ರೈತರು ಸ್ವಯಂಪ್ರೇರಿತರಾಗಿ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ವರ್ತಕರು, ವ್ಯಾಪಾರಿಗಳು, ದಲ್ಲಾಳಿಗಳು, ರೈತರು ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : - – – – -.