ಬಿಜೆಪಿ ನಿಯೋಗದಿಂದ ಕೆಆರ್ ಎಸ್ ಜಲಾಶಯ ಭೇಟಿ ಮುಂದೂಡಿಕೆ. ಮಂಡ್ಯ,ಸೆಪ್ಟಂಬರ್,7,2023(..):ಕೆಆರ್ ಎಸ್ ಜಲಾಶಯ ಭರ್ತಿಯಾಗದೇ ನೀರಿನ ಮಟ್ಟ ಕಡಿಮೆ ಇದ್ದರೂ ಸಹ ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ರೈತ ಸಂಘಟನೆಗಳು ಮತ್ತು ಬಿಜೆಪಿ ಪ್ರತಿಭಟನೆ ನಡೆಸಿತ್ತಿದೆ. ಈ ಮಧ್ಯೆ ನಾಳೆ ನಿಗದಿಯಾಗಿದ್ದ ಬಿಜೆಪಿ ನಿಯೋಗದ ಕೆಆರ್ ಎಸ್ ಜಲಾಶಯದ ಭೇಟಿ ಮುಂದಿನ ವಾರಕ್ಕೆ ಮುಂದೂಡಿಕೆಯಾಗಿದೆ. ನಾಳೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ. ಈ ಹಿಂದೆ ಪ್ರತಿಭಟನೆಯನ್ನು ಕೂಡಾ ಎರಡು ಬಾರಿ ಮುಂದೂಡಿದ್ದ ಬಿಜೆಪಿ, ರಾಜ್ಯ ಕಾರ್ಯಕಾರಣಿ ಸಭೆಯನ್ನು ಕೂಡಾ ಮುಂದೂಡಿತ್ತು. ಬಿಜೆಪಿ ನಾಯಕರು ನಿಯೋಗದಲ್ಲಿ ತೆರಳಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ ವಸ್ತುಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. : -- - -