ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಇಬ್ಬರು ಬಿಜೆಪಿ ನಾಯಕರು. ಬೆಂಗಳೂರು,ಸೆಪ್ಟೆಂಬರ್ 6,2023(..): ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೆ ಅಪರೇಷನ್ ಹಸ್ತದ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ಮಧ್ಯೆ ಇಬ್ಬರು ಬಿಜೆಪಿ ಮುಖಂಡರು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ಹಾಗೂ ಮಂಡ್ಯದ ಮಾಜಿ ಸಂಸದ ಎಲ್​​ಆರ್ ಶಿವರಾಮೇಗೌಡ ನಿನ್ನೆ ರಾತ್ರಿ ಡಿಸಿಎಂ ಡಿ.ಕೆ ಶಿವಕುಮಾರ್ ರನ್ನ ಭೇಟಿಯಾಗಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಗೆಸ್ಟ್​ಹೌಸ್​ನಲ್ಲಿ ಉಭಯ ನಾಯಕರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ‘ಆಪರೇಷನ್ ಹಸ್ತ’ದ ವದಂತಿ ಹೆಚ್ಚುತ್ತಿರುವ ಸಂದರ್ಭದಲ್ಲೇ ಉಭಯ ನಾಯಕರು ಉಪ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. : - - –- - .