ಆಟೋ-ಕ್ಯಾಂಟರ್ ಡಿಕ್ಕಿ: ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ ಹಾವೇರಿ,ಆಗಸ್ಟ್,31,2024 (..):ಆಟೋ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ. ಚಳಗೇರಿ ಟೋಲ್ ಬಳಿ ಆಟೋ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿರದ್ದು, ಗಾಯಾಳುಗಳನ್ನ ರಾಣೆಬೆನ್ನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ರಾಣೆಬೆನ್ನೂರು ಗ್ರಾಮಾಂತರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. : -, , ,