ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಮೈಸೂರು, ಸೆಪ್ಟಂಬರ್, 1,2024 (..):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹಾಗೂ ನಾಳೆ ಮೈಸೂರು ಪ್ರವಾಸದಲ್ಲಿರಲಿದ್ದಾರೆ. ಇಂದು ರಾತ್ರಿ 7.25 ಕ್ಕೆ ಮೈಸೂರು ನಗರಕ್ಕಾಗಮಿಸುವ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ವಾಸ್ತವ್ಯ ಇರಲಿದ್ದಾರೆ. ಸೆಪ್ಟೆಂಬರ್ 3 ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ನಂತರ ಬೆಳಿಗ್ಗೆ 10,30ಕ್ಕೆ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ನಡೆಯಲಿರುವ ಚಾಮುಂಡಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿ, ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : , , ,