ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇದೆ ಅನ್ನೋದು ಸುಳ್ಳು ಸುದ‍್ಧಿ- ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ. ಬೆಂಗಳೂರು,ಸೆಪ್ಟಂಬರ್,5,2023(..):ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇದೆ ಅನ್ನೋದು ಸುಳ್ಳು ಸುದ್ದಿ. ಆ ರೀತಿ ಸುಮ್ಮನೆ ಸುಳ್ಳು ಹಬ್ಬಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು. ಈ ಕುರಿತು ಇಂದು ಮಾತನಾಡಿದ ಸಚಿವ ಕೆ.ಜೆ ಜಾರ್ಜ್, ಬೇಸಿಗೆಯಲ್ಲಿ ಬೇಕಾಗುವಷ್ಟು ವಿದ್ಯುತ್ ಈಗಲೇ ಇದೆ. ಥರ್ಮಲ್ ವಿದ್ಯುತ್ ಘಟಕಗಳು ದುರಸ್ತಿಯಲ್ಲಿದೆ. ಮಳೆ ಹೆಚ್ಚಾಗಿದೆ, ಇದರಿಂದ ವಿದ್ಯುತ್ ಉತ್ಪಾದನೆ ಕೂಡ ಹೆಚ್ಚಾಗಿದೆ. ಇಂದು ನಿಗದಿಗಿಂತ 100 ಯೂನಿಟ್ ವಿದ್ಯುತ್ ಉತ್ಪಾದನೆ ಹೆಚ್ಚಿದೆ ಎಂದು ತಿಳಿಸಿದರು. : – – - - .