ಬರಪೀಡಿತ ತಾಲ್ಲೂಕುಗಳಿಗೆ ಹಣದ ಬದಲು ಅಕ್ಕಿ ವಿತರಣೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ. ಬೆಂಗಳೂರು,ಸೆಪ್ಟಂಬರ್,4,2023(..):ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು ಅಕ್ಕಿ ನೀಡಲಾಗುವುದು ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದರು. ಈ ಕುರಿತು ಇಂದು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, 114 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳಿಗೆ 10 ಕೆಜಿ ಅಕ್ಕಿ ವಿತರಣೆಗೆ ಸಿದ್ದತೆ ನಡೆಸಲಾಗುತ್ತಿದೆ ಎಂದರು. ಅಕ್ಕಿ ಕೊಡಲು ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸಘಡ್ ಸರ್ಕಾರ ಮುಂದೆ ಬಂದಿವೆ. ಒಂದು ವಾರದಲ್ಲಿ ಅಕ್ಕಿ ಖರೀದಿ ಪೈನಲ್ ಆಗಲಿದೆ. ಸದ್ಯ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ಆದಷ್ಟು ಬೇಗ ಹತ್ತು ಕೆಜಿ ಅಕ್ಕಿ ಕೋಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಮುನಿಯಪ್ಪ ಹೇಳಿದರು. : - – – –- - - .