ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣರನ್ನ ಅನರ್ಹಗೊಳಿಸಿ ಹೈಕೋರ್ಟ್ ಆದೇಶ. ಬೆಂಗಳೂರು, ಸೆಪ್ಟಂಬರ್,1,2023(..):ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಇದೀಗ ಪ್ರಜ್ವಲ್​ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಆದೇಶಿಸಿದೆ. : - –- – .