ಐಸಿಯುನಿಂದ ವಾರ್ಡ್​ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶಿಫ್ಟ್. ಬೆಂಗಳೂರು,ಆಗಸ್ಟ್,31,2023(..):ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಐಸಿಯುನಿಂದ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ಅವರು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಐಸಿಯುನಿಂದ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಮೂರು ದಿನಗಳ ಕಾಲ ವೈದ್ಯರು ವಾರ್ಡ್​​ನಲ್ಲೇ ನಿಗಾ ವಹಿಸಲಿದ್ದಾರೆ. ಹೆಚ್​.ಡಿ.ಕುಮಾರಸ್ವಾಮಿ ನಿನ್ನೆಯಿಂದ ICUನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ವಾರ್ಡ್​​ಗೆ ಶಿಫ್ಟ್ ಮಾಡಲಾಗಿದೆ. : - - – .