ಹೈಕೋರ್ಟ್ ನಲ್ಲಿ ಸಿಎಂ ಅರ್ಜಿ ವಿಚಾರಣೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಬೆಂಗಳೂರು,ಆಗಸ್ಟ್,31,2024 (..):ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ನ್ಯಾ. ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುದೀರ್ಘ ವಾದ ಮಂಡಿಸಿದರು. ನಂತರ ಸ್ನೇಹಮಯಿ ಕೃಷ್ಣ ಅವರ ಪರ ಮಣಿಂದರ್ ಸಿಂಗ್ ವಾದ ಮಂಡಿಸಿದ್ದಾರೆ. ಇದೀಗ ನ್ಯಾ. ಎಂ.ನಾಗಪ್ರಸನ್ನ ಅವರು ವಿಚಾರಣೆಯನ್ನ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದ್ದಾರೆ. : , , , ,