ಬೆಂಗಳೂರು ಏರ್ ಪೋರ್ಟ್ ನಲ್ಲಿ ಶಂಕಿತ ಉಗ್ರನ ಬಂಧನ ಬೆಂಗಳೂರು,ಆಗಸ್ಟ್​​ 31,2024 (..):ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ() ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಎನ್ ಐಎ ಅಧಿಕಾರಿಗಳು ನಿನ್ನೆಯೇ ಅಜೀಜ್ ಅಹ್ಮದ್ ನನ್ನು ಬಂಧಿಸಿ ಕರೆದೊಯ್ದಿದ್ದಾರೆ . ತಮಿಳುನಾಡಿನ ಹಿಜ್ಬುತ್ ಥರೀರ್ ಪ್ರಕರಣದ ಆರೋಪಿ ಅಜೀಜ್ ಅಹ್ಮದ್ ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯವನಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು. ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್​ಐಎಗೆ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್‌ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್​ ಅಹ್ಮದ್​​ನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : , , ,