ಕಾರು ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ. ರಾಮನಗರ, ಆಗಸ್ಟ್​ 28,2023(..):ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಸಾತನೂರು ಬಳಿ ನಡೆದಿದೆ. ಕನಕಪುರ ತಾಲ್ಲೂಕಿನ ಕೆಮ್ಮಾಳೆ ಗೇಟ್ ಬಳಿ ಈ ಘಟನೆ ಸಂಭವಿಸಿದೆ. ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಕೆಎ-1 ಎಂಎಫ್ 8055 ಸಂಖ್ಯೆಯ ಕಾರಿನಲ್ಲಿ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿದ್ದು, ಕ್ರೇನ್‌ ಸಹಾಯದಿಂದ ಗಾಯಾಳುಗಳ ರಕ್ಷಣೆ ಮಾಡಲಾಗಿದೆ. : - – – - - .