ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ಹರಕೆ ತೀರಿಸಿದ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್. ಮೈಸೂರು,ಆಗಸ್ಟ್,29,2023(..):ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ಹರಕೆ ಸಲ್ಲಿಸಿದರು. ಸಿಎಂ ಮತ್ತು ಡಿಸಿಎಂ ಗ್ಯಾರಂಟಿ ಕಾರ್ಡ್‌ ಇಟ್ಟು ಪೂಜೆ ಸಲ್ಲಿಸುವಾಗ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವುದಾಗಿ ಹರಕೆ ಕಟ್ಟಿಕೊಂಡಿದ್ದರು. ಕಾಂಗ್ರೆಸ್ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆ, ಈಗಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ಪೂಜೆ, ಪುನಸ್ಕಾರ ನೆರವೇರಿಸಿ .ದೇವಾಲಯದ ಮುಂದೆ ಈಡುಗಾಯಿ ಹೊಡೆದು ಹರಕೆ ಪೂರೈಸಿದರು. ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ಸೀರೆ ನೀಡಿ ಹರಕೆ ಸಲ್ಲಿಸಿದರು. ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತು ಫಲ ಸಮರ್ಪಣೆ ಮಾಡಿದರು. -. : - - - -.