ನಮ್ಮ ಪಕ್ಷ ಉಳಿಸುವ ಸಂಕಲ್ಪ: ನಾನೂ ಕೂಡ ಸಂಘಟನೆಯಲ್ಲಿ ಪಾಲ್ಗೊಳ್ಳುವೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ. ಬೆಂಗಳೂರು,ಆಗಸ್ಟ್,28,2023(..):ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನಮ್ಮ ಪಕ್ಷ ಉಳಿಸುವ ಸಂಕಲ್ಪ ಮಾಡಿದ್ದೇನೆ. ಹೀಗಾಗಿ ನಾನೂ ಕೂಡ ಪಕ್ಷದ ಸಂಘಟನೆಯಲ್ಲಿ ಪಾಲ್ಗೊಳ್ಳುವೆ ಎಂದು ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ, ಪಕ್ಷ ಸಂಘಟನೆಯ ದೃಷ್ಟಿಯಿಂದ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ನಮಗೆ ಯಾವ ಪಕ್ಷದ ಮೇಲೂ ದ್ವೇಷ ಇಲ್ಲ. ನಮ್ಮ ಪಕ್ಷ ಸಂಘಟನೆಗೊಳಿಸಿ ಉಳಿಸಬೇಕೆಂದು ಕೆಲಸ ಮಾಡುತ್ತಿದ್ದೇವೆ ಎಂದರು. ಈ ದೇಶದ ರಾಜಕಾರಣ ಹೇಗೆ ನಡೆಯುತ್ತಿದೆ ಎಂದು ನನಗೆ ಗೊತ್ತಿದೆ. ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸದಸ್ಯರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ. ನಾನು ಕೂಡ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು. : - – – – - .