ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾಂಗ್ರೆಸ್ ಶಕ್ತಿ ಪ್ರದರ್ಶನವಲ್ಲ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೈಸೂರು,ಆಗಸ್ಟ್,26,2023(..):ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಇದು ಕಾಂಗ್ರೆಸ್ ಶಕ್ತಿ ಪ್ರದರ್ಶನವಲ್ಲ. ರಾಹುಲ್ ಗಾಂಧಿ ಬರುತ್ತಿರುವುದು ರಾಜಕೀಯ ಉದ್ದೇಶವಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗ್ಯಾರಂಟಿ ಘೋಷಣೆ ಮಾಡಿದ್ದು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ. ಅವರ ಸಮ್ಮುಖದಲ್ಲೇ ಅನುಷ್ಠಾನ ಮಾಡುವ ಉದ್ದೇಶದಿಂದ ಅವರನ್ನು ಕರೆ ತರುತ್ತಿದ್ದೇವೆ ಅಷ್ಟೇ ಎಂದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಅಮಿತ್ ಶಾ ಕರೆ ಮಾಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ನಾನು ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕೆಲಸದಲ್ಲಿದ್ದೇನೆ. ಬೆಂಗಳೂರು ಬಿಟ್ಟು ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಯಾರು ಯಾರಿಗೆ ಕರೆ ಮಾಡಿದ್ರು ಯಾಕೆ ಕರೆ ಮಾಡಿದ್ರು ಇಂತಹ ಊಹಾಪೋಹದ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಬಿಜೆಪಿ ನಾಯಕರು ಬೀದಿಗೆ ಬಂದಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಅವರನ್ನು ನಾಯಕರು ಅಂತ ಒಪ್ಪಿಕೊಂಡಿದ್ದಾರೆ. ಯಾವ ಕಾರಣಕ್ಕೆ ಅವರನ್ನು ಅಲ್ಲಿ ನಿಲ್ಲಿಸಿದ್ದಾರೆ ಗೊತ್ತಿಲ್ಲ. ತಿಳಿಯದೇ ಮಾತನಾಡುವುದು ತಪ್ಪು ಎಂದರು. : - –-- – -