ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡಲ್ಲ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ ಹಾಸನ,ಆಗಸ್ಟ್,26,2023(..):ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಹಾಸನದಲ್ಲಿ ಇಂದು ಮಾತನಾಡಿದ ಸಚಿವ ಮುನಿಯಪ್ಪ, ಬಿಜೆಪಿ ಸರ್ಕಾರದ ಅವಧಿಯಲ್ಲಿ 3 ಲಕ್ಷ ಜನರು ಅರ್ಜಿ ಹಾಕಿದ್ದರು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚಿಸಲಾಗಿದೆ. ಇನ್ನು 3 ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ನೀಡಲಾಗುತ್ತದೆೆ ಎಂದರು. ಬ್ಯಾಂಕ್ ಖಾತೆ ಇಲ್ಲದಿದ್ದಕ್ಕೆ ಕೆಲವರ ಕಾರ್ಡ್ ರದ್ದಾಗಿತ್ತು. ಈ ಬಗ್ಗೆಯೂ ಕೂಡ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಯಾರು ಅರ್ಹರಿರುತ್ತಾರೋ ಅವರಿಗೆ ಯಾವ ತೊಂದರೆ ಆಗುವುದಿಲ್ಲ. ಎಲ್ಲವನ್ನೂ ಪರಿಶೀಲನೆ ಮಾಡಿ ಅಕ್ಕಿ ವಿತರಣೆ ಬಗ್ಗೆ ಕ್ರಮ ವಹಿಸುತ್ತೇವೆ ಎಂದು ಕೆ.ಎಚ್ ಮುನಿಯಪ್ಪ ತಿಳಿಸಿದರು. : - – – – -