ಕಾಂಗ್ರೆಸ್ ನ ಅಪರೇಷನ್ ಹಸ್ತ ಯಶಸ್ವಿಯಾಗಲ್ಲ – ಮಾಜಿ ಸಿಎಂ ಬೊಮ್ಮಾಯಿ. ಹುಬ್ಬಳ್ಳಿ,ಆಗಸ್ಟ್,25,2023(..):ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಜೆಡಿಎಸ್ ಮುಖಂಡರನ್ನ ಸೆಳೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸೋಲಿನ ಭೀತಿ ಇದೆ. ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಅಂತ ಮಾಹಿತಿ ಇದೆ. ಹೆಚ್ಚು ಸೀಟ್​ ಗೆಲ್ಲದಿದ್ದರೇ ಕಾಂಗ್ರೆಸ್ ಸರ್ಕಾರದ ಭವಿಷ್ಯಕ್ಕೆ ಸಮಸ್ಯೆ ಇದೆ. ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಪಕ್ಷ ಕೈಹಾಕಿದೆ. ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ನುಡಿದರು. ಸರ್ಕಾರದ ವಿರುದ್ಧ ಧ್ವನಿ ಎತ್ತುವವರ ಧ್ವನಿ ದಮನ ಮಾಡಲಾಗುತ್ತಿದೆ ಎಂದು ಆರೋಪಿಸಿದ ಬೊಮ್ಮಾಯಿ, ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೇ ಆವರಿಸಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. : - - - – -