ಬಾಹ್ಯಾಕಾಶ ಕ್ಷೇತ್ರದಲ್ಲಿ ಇತಿಹಾಸ ಸೃಷ್ಠಿಸಿದ ಭಾರತ: ಚಂದ್ರನ ಅಂಗಳದಲ್ಲಿ ವಿಕ್ರಂ ಲ್ಯಾಂಡರ್ ಸಾಫ್ಟ್ ಲ್ಯಾಂಡ್ ಯಶಸ್ವಿ.. ಬೆಂಗಳೂರು,ಆಗಸ್ಟ್,23,2023(..):ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಇತಿಹಾಸ ಸೃಷ್ಠಿಸಿದ್ದು, ಚಂದ್ರನ ಅಂಗಳದಲ್ಲಿ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ಈ ಮೂಲಕ ಇಸ್ರೋ ದಶಕಗಳ ಕನಸು ನನಸಾಗಿದ್ದು, ದಕ್ಷಿಣ ಧ್ರುವದಲ್ಲಿ ಕಾಲಿಟ್ಟ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಆಗಿದೆ. ಈ ಮೂಲಕ ಇಸ್ರೋ ವಿಜ್ಞಾನಿಗಳು ಇತಿಹಾಸ ಸೃಷ್ಠಿಸಿದ್ದಾರೆ. ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಸುಸೂತ್ರವಾಗಿ ಇಳಿದ ಹಿನ್ನೆಲೆ ಇಸ್ರೋ ವಿಜ್ಞಾನಿಗಳು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. : – - - - –