ವರಮಹಾಲಕ್ಷ್ಮಿ ಹಬ್ಬಕ್ಕೆಂದು ಹೂ ಕೀಳಲು ಹೋಗಿ ತಂದೆ ಮಗ ಸಾವು.. ದೊಡ್ಡಬಳ್ಳಾಪುರ,ಆಗಸ್ಟ್,24,2023(..):ವರಮಹಾಲಕ್ಷ್ಮಿ ಹಬ್ಬಕ್ಕೆಂದು ತಾವರೆ ಹೂ ಕೀಳಲು ಹೋಗಿದ್ದ ತಂದೆ ಮಗ ದುರಂತವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳಾದ ಪುಟ್ಟರಾಜು(42), ಮಗ ಕೇಶವ(14) ಮೃತಪಟ್ಟವರು. ವರಮಹಾಲಕ್ಷ್ಮಿ ಹಬ್ವಕ್ಕೆಂದು ತಾವರೆ ಹೂ ತಂದು ಮಾರಾಟ ಮಾಡಲು ತಂದೆ ಮಗ ಪ್ಲಾನ್​ ಮಾಡಿದ್ದರು. ಹೀಗಾಗಿ ಹೂ ತರಲು ಭೂಚನಹಳ್ಳಿ ಕೆರೆಗೆ ಇಳಿದಿದ್ದಾರೆ. ಮೊದಲು ಹೂ ಕೀಳಲು ಪುತ್ರ ಕೇಶವ ಕೆರೆಗೆ ಇಳಿದಿದ್ದಾನೆ. ಆದರೆ, ಏಕಾಏಕಿ ಕೇಶವ್ ನೀರಿನಲ್ಲಿ ಮುಳುಗಿದ್ದು, ಕೂಡಲೇ ತಂದೆ ಪುಟ್ಟರಾಜು ಸಹ ಪುತ್ರನನ್ನು ರಕ್ಷಿಸಲು ನೀರಿಗಿಳಿದಿದ್ದಾರೆ.ಆದರೆ, ದುರದೃಷ್ಟವಶಾತ್​ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಾಗಿದೆ. : – - – - .