ಅಕ್ರಮ ಆಸ್ತಿ ಗಳಿಕೆ ಆರೋಪ: ಸರ್ವೇ ಸೂಪರ್ ವೈಸರ್ ಬಂಧನ. ಬೆಂಗಳೂರು, ಆಗಸ್ಟ್ 23,2023(..):ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್​​ವೈಸರ್ ರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್​​ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ ಬಂಧಿಸಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಿನ್ನೆ ಶ್ರೀನಿವಾಸಮೂರ್ತಿ ಅವರ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ ಬಂಧಿಸಿ ವಿಚಾರಣೆಗೊಳಪಡಿಸಿದೆ. ಬೆಂಗಳೂರಿನ ಕಲ್ಕೆರೆ ನಿವಾಸದ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಶ್ರಿನಿವಾಸ್ ಸೋದರಿ ಹಾಗೂ ಸೋದರನ ಮನೆ ಸೇರಿದಂತೆ 14 ಕಡೆ ದಾಳಿ ಮಾಡಿದ್ದರು. ರಿಯಲ್ ಎಸ್ಟೇಟ್​ನಲ್ಲೂ ಹೂಡಿಕೆ ಮಾಡಿರುವ ಬಗ್ಗೆ ದಾಖಲೆ ಲಭ್ಯವಾಗಿವೆ. ಹೀಗಾಗಿ ಶ್ರೀನಿವಾಸ್ ಅವರನ್ನು ಬಂಧಿಸಿದ್ದು, ಆಸ್ತಿ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇನ್ನು ಶ್ರೀನಿವಾಸ್ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ಆ ವೇಳೆ ತಮ್ಮ ವಶಕ್ಕೆ ಕೇಳಲಿದ್ದಾರೆ ಎಂದು ಹೇಳಲಾಗುತ್ತಿದೆ. : –-- - –