ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ: ಬೆಂ-ಮೈ ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆಗೆ ಯತ್ನ. ಮಂಡ್ಯ,ಆಗಸ್ಟ್,22,2023(..):ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನ ವಿರೋಧಿಸಿ ಮಂಡ್ಯದಲ್ಲಿ ಸರ್ಕಾರದ ವಿರುದ್ದ ರೈತರ ಆಕ್ರೋಶ ಹೆಚ್ಚಾಗಿದ್ದು ಇಂದು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆಗೆ ಯತ್ನಿಸಿದರು. ಮಂಡ್ಯ ತಾಲ್ಲೂಕು ಇಂಡವಾಳು ಗ್ರಾಮದ ಬಳಿ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇ ತಡೆದು ರೈತರು ಪ್ರತಿಭಟನೆಗೆ ಮುಂದಾದರು. ಎತ್ತಿನಗಾಡಿ ಸಮೇತ ಹೆದ್ದಾರಿಗೆ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದು ಈ ವೇಳೆ ಪೊಲೀಸರು ರೈತರನ್ನ ತಡೆದರು. ಸರ್ಕಾರ ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ.ಮೊದಲು ತಮಿಳುನಾಡಿಗೆ ಬಿಡುತ್ತಿರುವ ನೀರನ್ನ ನಿಲ್ಲಿಸಬೇಕು ಎಂದು ರೈತರು ಆಗ್ರಹಿಸಿದರು. ಈ ಸಮಯದಲ್ಲಿ ರೈತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದು ರೈತರನ್ನ ಪೊಲೀಸರು ವಶಕ್ಕೆ ಪಡೆದು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸ್ಥಳಾಂತರಿಸಿದರು. : – – – - –