ಇಂದು ಕಾಂಗ್ರೆಸ್ ಸೇರಲಿದ್ದಾರೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು. ಬೆಂಗಳೂರು,ಆಗಸ್ಟ್,21,2023(..):ರಾಜ್ಯದಲ್ಲಿ ಪಕ್ಷಾಂತರ ವಿಚಾರ ಇದೀಗ ಸಾಕಷ್ಟು ಸದ್ದು ಮಾಡುತ್ತಿದ್ದು. ಈ ಹಿಂದೆ ಬಿಜೆಪಿ ಸೇರಿದ್ದ ವಲಸೆ ಶಾಸಕರಲ್ಲಿ ಕೆಲವರು ಮತ್ತೆ ವಾಪಸ್ ಕಾಂಗ್ರೆಸ್ ಗೆ ಹೋಗಲಿದ್ದಾರೆ ಎಂಬ ಸುದ್ದಿ ಇದೆ. ಈ ಮಧ್ಯೆ ಇಂದು ಕೆಲ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಕಳೆದ ವಿಧಾಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಜೆಡಿಎಸ್ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಆಯನೂರು ಮಂಜುನಾಥ್​ ಇದೀಗ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿ ಮುಖಂಡ ಶಿಕಾರಿಪುರ ನಾಗರಾಜ್ ಗೌಡ​ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇನ್ನು ಎಸ್​.ಟಿ.ಸೋಮಶೇಖರ್​ ಬೆಂಬಲಿಗರು ಕೂಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ 15ಕ್ಕೂ ಅಧಿಕ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : - - - -.