ಅಮೆರಿಕಾದಲ್ಲಿ ಕರ್ನಾಟಕ ಮೂಲದ ದಂಪತಿ ಮತ್ತು ಮಗು ಅನುಮಾನಸ್ಪದ ಸಾವು. ದಾವಣಗೆರೆ, ಆಗಸ್ಟ್​ 19,2023(..):ಅಮೆರಿಕದಲ್ಲಿ ಕರ್ನಾಟಕ ಮೂಲದ ದಂಪತಿ ಹಾಗೂ ಪುತ್ರ ಅನುಮಾನಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಅಮೇರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ಈ ಘಟನೆ ನಡೆದಿದ್ದು, ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಪುತ್ರ ಯಶ್(6) ಮೃತಪಟ್ಟವರು. ಮೃತರು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ನಿವಾಸಿಗಳಾಗಿದ್ದಾರೆ. ಕಳೆದ 9 ವರ್ಷಗಳಿಂದ ಯೋಗೇಶ್​, ಪ್ರತಿಭಾ ಇಬ್ಬರೂ ಅಮೆರಿಕದಲ್ಲಿ ವಾಸವಾಗಿದ್ದರು. ವೃತ್ತಿಯಲ್ಲಿ ಇಬ್ಬರೂ ಇಂಜಿನಿಯರ್​ ಆಗಿದ್ದರು. ಇದೀಗ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಸಾವಿಗೆ ನಿಖರ ಕಾರಣ ತಿಳಿಸಿ ಮೃತದೇಹ ತರಿಸಿಕೊಡುವಂತೆ ಮೃತ ಯೋಗೇಶ್ ತಾಯಿ ಶೋಭಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. : – - – – – .