ಕಾಮಗಾರಿ ಮುಗಿಸಿದರೂ ಬಾರದ ಬಾಕಿ ಬಿಲ್; ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ. ಬೆಳಗಾವಿ,ಆಗಸ್ಟ್,19,2023(..):ಶಾಲಾ ಕಟ್ಟಡ ಕಾಮಗಾರಿ ಮುಗಿಸಿದರೂ ಬಾಕಿ ಬಿಲ್ ಬಾರದ ಹಿನ್ನಲೆ ಗುತ್ತಿಗೆದಾರನೋರ್ವ ಅದೇ ಶಾಲಾ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟೆನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆಣಚಿನಮರಡಿಯಲ್ಲಿ ಈ ಘಟನೆ ನಡೆದಿದೆ. ಗುತ್ತಿಗೆದಾರ ರಾಮಣ್ಣ ಅಡಿವೆಪ್ಪ ಸರಕಪ್ಪಗೋಳ ಆತ್ಮಹತ್ಯೆಗೆ ಯತ್ನಿಸಿದವರು. 2018ರಲ್ಲಿ ಪ್ರೌಢ ಶಾಲಾ ಕಟ್ಟಡ ಕಾಮಗಾರಿ ಕೈಗೊಂಡಿದ್ದ ರಾಮಣ್ಣ ಅವರು ಎನ್​ಸಿಸಿ ಕಂಪನಿಯಿಂದ ಬಿಲ್ ಬಾಕಿ ಉಳಿಸಿಕೊಂಡಿರುವುದಾಗಿ ಆರೋಪಿಸಿ ಈ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಂತರ ಪೊಲೀಸರು ಬಂದು ರಾಮಣ್ಣ ಅವರ ಮನವೊಲಿಸಿ ಕಟ್ಟಡದಿಂದ ಕೆಳಗಿಳಿಸಿದ್ದಾರೆ ಎನ್ನಲಾಗಿದೆ. : - –-- - .