ತಮಿಳುನಾಡಿಗೆ ಹೆಚ್ಚುವರಿ ನೀರು: 107 ಅಡಿಗೆ ಕುಸಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ. ಮಂಡ್ಯ,ಆಗಸ್ಟ್,19,2023(..):ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸಿದ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 107 ಅಡಿಗೆ ಕುಸಿದಿದೆ. ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುತ್ತಿದೆ. ಕೆಆರ್​ಎಸ್​​ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ. ಸದ್ಯ ಈಗ 107 ಅಡಿಗೆ ಕುಸಿದಿದೆ. ಕೆಆರ್ ಎಸ್ ಜಲಾಶಯ ಭರ್ತಿಯಾಗುವ ಮುನ್ನವೇ ತಮಿಳುನಾಡಿಗೆ ಸರ್ಕಾರ ನೀರು ಹರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮಂಡ್ಯದ ವಿವಿಧ ಕಡೆಗಳಲ್ಲಿ ಸರ್ಕಾರದ ನಡೆ ಖಂಡಿಸಿ ರೈತರ ಪ್ರತಿಭಟನೆಗಳು ನಡೆಯುತ್ತಿದೆ. ಇತ್ತ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿಪಕ್ಷಗಳ ನಾಯಕರುಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. : - - -107 .