ತಮಿಳುನಾಡಿಗೆ ಕಾವೇರಿ ನೀರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ. ಚಿಕ್ಕಮಗಳೂರು,ಆಗಸ್ಟ್,19,2023(..):ನಿರೀಕ್ಷಿತ ಮಳೆಯಾಗದ ಹಿನ್ನೆಲೆ ಆಗಸ್ಟ್ ಬಂದರೂ ಸಹ ಕೆಆರ್ ಎಸ್ ಜಲಾಶಯ ಇನ್ನೂ ಭರ್ತಿಯಾಗಿಲ್ಲ. ಆದರೂ ಸಹ ತಮಿಳುನಾಡಿಗೆ ನೀರು ಹರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸರ್ಕಾರ ಕರ್ನಾಟಕದ ಜನರನ್ನು ಬಲಿ ಕೊಡುವ ಕೆಲಸ ಮಾಡುತ್ತಿದೆ. ಬೆಂಗಳೂರಿನ ನಗರದಲ್ಲೇ ಬೇಕಾದಷ್ಟು ನೀರನ್ನು ಬಿಡುತ್ತಿಲ್ಲ. ಒಂದೆಡೆ ನೀರು, ವಿದ್ಯುತ್ ಇಲ್ಲ, ಮತ್ತೊಂದೆಡೆ ಮಳೆಯೂ ಸರಿಯಾಗಿ ಆಗಿಲ್ಲ. ಮಂಡ್ಯ, ಮೈಸೂರು, ಬೆಂಗಳೂರು ಕಡೆ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಆದರೂ ತಮಿಳುನಾಡಿಗೆ ನೀರು ಹರಿಸಲಾಗಿದೆ. ರಾಜ್ಯ ಸರ್ಕಾರ ಜನರ ದೃಷ್ಟಿಯಲ್ಲಿ ಯೋಚನೆ ಮಾಡುತ್ತಿಲ್ಲ ಎಂದು ಕಿಡಿಕಾರಿದರು. : – - - - .