ಆ.30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ. ಬೆಂಗಳೂರು,ಆಗಸ್ಟ್,19.2023(..):ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ, ದಿನಾಂಕವನ್ನ ಬದಲಾವಣೆ ಮಾಡಲಾಗಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಆಗಸ್ಟ್ 27ರ ಬದಲು ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ​ ತಿಳಿಸಿದ್ದಾರೆ. ಈ ಹಿಂದೆ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಆಗಸ್ಟ್​ 30ಕ್ಕೆ ಬೆಂಗಳೂರಿಗೆ ರಾಹುಲ್ ಗಾಂಧಿ ಬರುತ್ತಿದ್ದಾರೆ. ಹೀಗಾಗಿ ಮೈಸೂರಿನಲ್ಲಿ ಕಾರ್ಯಕ್ರಮ ನಡೆಸಲು ನಿರ್ಧಾರ ಮಾಡಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. : 30- – – -