ಆ.23ಕ್ಕೆ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್. ಬೆಂಗಳೂರು,ಆಗಸ್ಟ್,19,2023(..):ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಆದರೆ ಮೊದಲು ಬಿಜೆಪಿ ನಾಯಕ ಯಾರೆಂದು ಹೇಳಲಿ. ನಂತರ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿ ಎಂದು ಲೇವಡಿ ಮಾಡಿದರು. ಶಾಸಕರ ಘರ್ ವಾಪಸಿ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮಹಾರಾಷ್ಟರ ಮಧ್ಯ ಪ್ರದೇಶದಲ್ಲಿ ಬಿಜೆಪಿ ಮಾಡಿದ್ದು ಸರಿಯಾ..? ಬಿಜೆಪಿಯವರು ತಮ್ಮ ಅನುಕೂಲಕ್ಕೆ ತೀರ್ಮಾನ ಮಾಡಿಕೊಳ್ಳುತ್ತಾರೆ ಎಂದರು. : - - – -