ಎಪಿಎಲ್, ಬಿಪಿಎಲ್ ಕಾರ್ಡ್​​ ಅರ್ಜಿ ಸಲ್ಲಿಕೆಗೆ ಅನುಮತಿ ಇಲ್ಲ-ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಬೆಂಗಳೂರು,ಆಗಸ್ಟ್,18,2023(..):ಎಪಿಎಲ್, ಬಿಪಿಎಲ್ ಕಾರ್ಡ್​​ ಅರ್ಜಿ ಸಲ್ಲಿಕೆಗೆ ಅನುಮತಿ ಇಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ. ಎಪಿಎಲ್, ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ನಾವೇ ಪೋರ್ಟಲ್​​​ ಓಪನ್ ಮಾಡಿಲ್ಲ. ಏನು ಕಾರಣ ಅಂತ ಸದ್ಯದರಲ್ಲೇ ಹೇಳುತ್ತೇವೆ ಎಂದರು. ಆ.25 ಅಥವಾ 26ರೊಳಗೆ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣವನ್ನ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುತ್ತೇವೆ. ಕಳೆದ ತಿಂಗಳು ಡಿಬಿಟಿ ವಿಚಾರವಾಗಿ ಹಣ ಹಾಕುವುದು ತಡವಾಯಿತು. ಆಹಾರ ಇಲಾಖೆಯಲ್ಲಿ 2,181 ಖಾಲಿ ಹುದ್ದೆ ಭರ್ತಿಗೆ ನಿರ್ಧಾರ ಮಾಡಲಾಗಿದೆ ಎಂದರು. ಸೆಪ್ಟಂಬರ್ ನಲ್ಲೂ ಹೆಚ್ಚುವರಿ 5 ಕೆ.ಜಿ ಅಕ್ಕಿ ಸಿಗಲ್ಲ. ಅಕ್ಕಿ ಕೊಡಲು ಆಂಧ್ರ ತೆಲಂಗಾಣ ಒಪ್ಪಿವೆ. ಅಕ್ಕಿದರದ ಬಗ್ಗೆ ಮಾತುಕತೆ ನಡೆಸುತ್ತೇವೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. : - - – – -