ಪರಿಷತ್ ಗೆ ಸುಧಾಮ್ ದಾಸ್ ನಾಮನಿರ್ದೇಶನಕ್ಕೆ ವಿರೋಧ: ಹೈಕಮಾಂಡ್ ಗೆ ನಾಲ್ವರು ಸಚಿವರಿಂದ ಪತ್ರ. ಬೆಂಗಳೂರು,ಆಗಸ್ಟ್,18,2023(..):ವಿಧಾನ ಪರಿಷತ್ ಗೆ ಸುಧಾಮ್ ದಾಸ್ ನಾಮನಿರ್ದೇಶನಕ್ಕೆ ವಿರೋಧ ವ್ಯಕ್ತಪಡಿಸಿ ನಾಲ್ವರು ಸಚಿವರು ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ. ವಿಧಾನ ಪರಿಷತ್ ಗೆ ನಾಮನಿರ್ದೇಶನಕ್ಕೆ ಹಿರಿಯ ನಟಿ ಉಮಾಶ್ರೀ, ಸುಧಾಮ್ ದಾಸ್ , ಎಂಆರ್ ಸೀತಾರಾಮ್ ಮೂವರು ಹೆಸರನ್ನ ವಿಧಾನಪರಿಷತ್ ಗೆ ನಾಮನಿರ್ದೇಶನ ಮಾಡಲು ಶಿಫಾರಸು ಮಾಡಲಾಗಿದೆ. ಆದರೆ ಸುಧಾಮ್ ದಾಸ್ ನಾಮ ನಿರ್ದೇಶನಕ್ಕೆ ವಿರೋಧ ವ್ಯಕ್ತಪಡಿಸಿರುವ ಸಚಿವರಾದ ಹೆಚ್.ಸಿ ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಕೆ.ಎಚ್ ಮುನಿಯಪ್ಪ, ಆರ್.ಬಿ ತಿಮ್ಮಾಪುರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ನಾಮ ನಿರ್ದೇಶನ ಮಾಡುವಾಗ ನಮ್ಮ ಅಭಿಪ್ರಾಯವನ್ನ ಕೇಳಿಲ್ಲ. ಸುಧಾಮ್ ದಾಸ್ ನಾಮನಿರ್ದೇಶನವನ್ನ ನಾವು ವಿರೋಧಿಸುತ್ತೇವೆ ಎಂದು ನಾಲ್ವರು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. : – - –- - .