ದೇವಸ್ಥಾನಗಳ ಜೀರ್ಣೋದ್ದಾರ ಅನುದಾನಕ್ಕೆ ರಾಜ್ಯ ಸರ್ಕಾರ ತಡೆ. ಬೆಂಗಳೂರು,ಆಗಸ್ಟ್,18,2023(..):ರಾಜ್ಯದಲ್ಲಿನ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನಕ್ಕೆ ರಾಜ್ಯ ಸರ್ಕಾರ ತಡೆ ಹಿಡಿದಿದೆ. ಈ ಕುರಿತು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ. ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡದಂತೆ ಆದೇಶದಲ್ಲಿ ಸೂಚಿಸಿದೆ. ಇನ್ನು ಶೇ‌.50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ಅದನ್ನು ತಕ್ಷಣ ತಡೆ ಹಿಡಿದು ಅನುದಾನ ಬಿಡುಗಡೆ ಮಾಡದಂತೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅನುದಾನದ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯುವುದು. ಹೀಗೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮೂರು ನಿರ್ದೇಶನಗಳನ್ನು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ. : - - – .