ಮೈಸೂರು ಜಿಲ್ಲೆ ಶಾಸಕರು, ಉಸ್ತುವಾರಿ ಸಚಿವರ ಜೊತೆ ಸಿಎಂ ಸಭೆ: ಪಾಲಿಕೆ ಚುನಾವಣೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ.. ಬೆಂಗಳೂರು,ಆಗಸ್ಟ್, 17,2023(..):ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ಮೈಸೂರು ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಮೈಸೂರು ಪಾಲಿಕೆ ಚುನಾವಣೆ ಕೂಡ ಚುನಾವಣೆ ವೇಳೆಗೆ ಬರುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಎರಡೂ ಚುನಾವಣೆಗಳು ಮಹತ್ವದ್ದು. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವುದು ಖಚಿತ. ಅದೇ ರೀತಿ ಮೈಸೂರು ಪಾಲಿಕೆಯನ್ನೂ ಗೆಲ್ಲಬೇಕು ಎನ್ನುವ ಖಚಿತ ನಿರ್ಧಾರಕ್ಕೆ ಬರಲಾಯಿತು. ಶಾಸಕರು ಮತ್ತು ಜಿಲ್ಲಾ ಮಂತ್ರಿಗಳೊಂದಿಗೆ ಸಮನ್ವಯ. ಸರ್ಕಾರ ಮತ್ತು ಪಕ್ಷದ ಜತೆ ಸಮನ್ವಯ. ಐದು ಗ್ಯಾರಂಟಿ ಯೋಜನೆಗಳನ್ನು ಮಧ್ಯಮ ಮತ್ತು ಬಡ ವರ್ಗದ ಎಲ್ಲಾ ಜಾತಿ ಸಮುದಾಯಗಳ ಮನೆ ಬಾಗಿಲಿಗೆ ತಲುಪಿಸಿವುದು. ಮೈಸೂರು, ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸುವ ಸಂಬಂಧ ಅರ್ಥಪೂರ್ಣ ಚರ್ಚೆ ನಡೆಯಿತು. : - – - – -- .