ಬಸ್ ಹರಿದು ನಾಲ್ಕು ವರ್ಷದ ಬಾಲಕಿ ಸಾವು. ಬೆಂಗಳೂರು,ಆಗಸ್ಟ್,16,2023(..):ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬಿಎಂಟಿಸಿ ಬಸ್ಹರಿದು ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ ಕೆಜಿ ವಿದ್ಯಾರ್ಥಿನಿ ಪೂರ್ವಿ ರಾವ್ ಮೃತಪಟ್ಟ ಬಾಲಕಿ. ತಂದೆ ಪ್ರಸನ್ನ ಅವರ ಜೊತೆ ಬಾಲಕಿ ಬೈಕ್ ​ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಉತ್ತರಹಳ್ಳಿ ಮುಖ್ಯರಸ್ತೆಯ ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಪ್ರಸನ್ನ ಬೈಕ್ ​ನ ಎಡಬದಿಗೆ ಬಿದ್ದರೆ ಪೂರ್ವಿ ಬೈಕ್ ​​ನ ಬಲಬದಿ ಬಿದ್ದಿದ್ದಾಳೆ. ಇದೇ ವೇಳೆ ಬಸ್ ಪೂರ್ವಿ ಮೇಲೆ ಹರಿದುಹೋಗಿದೆ. ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. : -- - – –-