ನಾವು ನುಡಿದಂತೆ ನಡೆದಿದ್ದೇವೆ ಎಂಬುದಕ್ಕೆ ಐದು ಕಾರ್ಯಕ್ರಮಗಳೇ ಸಾಕ್ಷಿ -ಸಚಿವ ಸಂತೋಷ್ ಲಾಡ್ ಧಾರವಾಡ,ಆಗಸ್ಟ್,16,2023(..):ರಾಜ್ಯದಲ್ಲಿ ನಾವು ಅಧಿಕಾರಕ್ಕೇರಿದ್ದು ಜನರಿಗೆ ಕೊಟ್ಟ ಮಾತನ್ನ ಈಡೇರಿಸುತ್ತಿದ್ದೇವೆ. ನಾವು ನುಡಿದಂತೆ ನಡೆದಿದ್ದೇವೆ. ಇದಕ್ಕೆ ನಮ್ಮ ಐದು ಕಾರ್ಯಕ್ರಮಗಳೇ ಸಾಕ್ಷಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ನುಡಿದರು. ಧಾರವಾಡದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಚಿವ ಸಂತೋಷ ಲಾಡ್, ಬಿಜೆಪಿ ನಮ್ಮ ಮೇಲೆ ಆರೋಪ ಮಾಡುತ್ತಾ ಬಂದಿದೆ. ನಾವು ರೂ. 60 ಸಾವಿರ ಕೋಟಿಯನ್ನು ನೇರವಾಗಿ ಬಡ ಜನರಿಗೆ ತಲುಪಿಸುತ್ತಿದ್ದೇವೆ. ನಾವು ಅಕ್ಕಿ ಕೊಡುತ್ತಿರುವದಕ್ಕೆ ಬಿಜೆಪಿಯವರು ಅದನ್ನ ಮೋದಿ ಅಕ್ಕಿ ಅಂತಾ ಹೇಳಿದ್ರು. ಆದರೆ ಅದು ಮೋದಿ ಅಕ್ಕಿಯಲ್ಲ. ಅದಕ್ಕೆ ಬೇಕಾದ ಆಹಾರ ಭದ್ರತೆ ಕಾಯಿದೆ ತಂದಿದ್ದು ಕಾಂಗ್ರೆಸ್ ಎಂದು ಟಾಂಗ್ ನೀಡಿದರು. 2013ರಿಂದ 18ರವರೆಗೆ ಇದ್ದ ಕಾಂಗ್ರೆಸ್ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ಬಡ್ಡಿ ರಹಿತ ಸಾಲ ಆರಂಭಿಸಿದ್ದು ಸಿದ್ದರಾಮಯ್ಯ. ಈ ಬಾರಿ ಐದು ಲಕ್ಷದವರೆಗೆ ಬಡ್ಡಿ ರಹಿತ ಸಾಲ ಕೊಡಲಿದ್ದೇವೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು. : - -