77ನೇ ಸ್ವಾತಂತ್ರ್ಯೋತ್ಸವ: ಸರ್ಕಾರದ ಸಾಧನೆ, ಯೋಜನೆಗಳ ಬಗ್ಗೆ ಸಿಎಂ ಸಿದ್ಧರಾಮಯ್ಯ ಸುದೀರ್ಘ ಮಾತು: ಭಾಷಣದ ಹೈಲೈಟ್ಸ್ ಇಲ್ಲಿದೆ.. ಬೆಂಗಳೂರು,ಆಗಸ್ಟ್,15,2023(..):ದೇಶದಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವಾಗಿದ್ದು, ಬೆಂಗಳೂರಿನ ಮಾಣಿಕ್​ ಷಾ ಪರೇಡ್​​ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ‍್ಧರಾಮಯ್ಯ, ಸರ್ಕಾರದ ಮೂರು ತಿಂಗಳ ಸಾಧನೆ, ಮುಂದಿನ ಯೋಜನೆಗಳ ಬಗ್ಗೆ ಸುದೀರ್ಘ ಮಾಹಿತಿ ನೀಡಿದರು. ಇಂದು77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ‍್ಧರಾಮಯ್ಯ ಮಾಡಿದ ಭಾಷಣದ ಹೈಲೈಟ್ಸ್ ಇಲ್ಲಿದೆ.. “ಕತ್ತಿ ಪರದೇಶಿಯಾದರೆ ಮಾತ್ರ ನೋವೆ? ನಮ್ಮವರೆ ಹದಹಾಕಿ ತಿವಿದರದು ಹೂವೆ?” ಎಂದು ಪ್ರಶ್ನಿಸಿದ್ದಾರೆ. 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತರರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ ಪ್ರಶಂಸೆ ಮಾಡಿ ಬರೆದಿವೆ. ಶಕ್ತಿ ಯೋಜನೆ ನಮ್ಮ ಆರ್ಥಿಕ ಶಕ್ತಿಗೆ ನವ ಚೈತನ್ಯವನ್ನೇ ಉಂಟು ಮಾಡಿದೆ. ಇದುವರೆಗೆ 38.54 ಕೋಟಿ ಟ್ರಿಪ್‍ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. 10 ವರ್ಷಗಳಲ್ಲಿ ರಾಜ್ಯದ ಕೈಗಾರಿಕಾ ವಲಯವು ಶೇ. 9.3 ರ ದರದಲ್ಲಿ ಬೆಳವಣಿಗೆ ದಾಖಲಿಸಿದೆ. ಮುಂದಿನ ದಿನಗಳಲ್ಲಿ ಈ ಬೆಳವಣಿಗೆ ದರವನ್ನು ಶೇ. 15-16 ಕ್ಕೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಇದಕ್ಕೆ ಪ್ರತಿವರ್ಷ ಕನಿಷ್ಠ 1.4 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ 14 ಲಕ್ಷ ಹೊಸ ಉದ್ಯೋಗಗಳ ಸೃಜನೆಯಾಗುವ ಅಗತ್ಯವಿದೆ. ಕಟ್ಟಿಕೊಡು ಮನೆಗಳನು ಇದು ಮೊದಲು, ಆಮೇಲೆ ಉಳಿದುದೆಲ್ಲ.” ಎಂದು ಎಂ. ಗೋಪಾಲಕೃಷ್ಣ ಅಡಿಗರು ಹೇಳುತ್ತಾರೆ. ನಮ್ಮ ಗ್ಯಾರಂಟಿ ಯೋಜನೆಗಳಿಗೆ ಪ್ರೇರಣೆ ಇದೇ ಚಿಂತನೆಯಾಗಿದೆ. : 77th - - – ’