ಎಫ್ ಐಆರ್ ರದ್ದುಕೋರಿ ಹೈಕೋರ್ಟ್ ಮೊರೆ ಹೋದ ನಟ ಉಪೇಂದ್ರ. ಬೆಂಗಳೂರು,ಆಗಸ್ಟ್,14,2023(..):ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ನಟ ರಿಯಲ್ ಸ್ಟಾರ್ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣ ಸಂಬಂಧ ನಟ ಉಪೇಂದ್ರ ಅವರ ವಿರುದ್ಧ ತನಿಖೆ ನಡೆಯುತ್ತಿದೆ. ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಉಪೇಂದ್ರಗೆ ನೋಟಿಸ್ ಜಾರಿ ಮಾಡಲಾಗಿದೆ. ಈ ಮಧ್ಯೆ ಎಫ್‌ಐಆರ್ ರದ್ದು ಕೋರಿ ಉಪೇಂದ್ರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ‘ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಒಳ್ಳೆಯದನ್ನು ಮಾಡುವಾಗಲೂ ಟೀಕಿಸುವವರು ಇದ್ದೇ ಇರುತ್ತಾರೆ. ಈ ಮಾತಿಗೆ ಪೂರಕವಾಗಿ ಮಾತ್ರವೇ ಗಾದೆ ಬಳಸಲಾಗಿದೆ. ಆಕ್ಷೇಪ ವ್ಯಕ್ತವಾದ ಕೂಡಲೇ ಡಿಲೀಟ್ ಮಾಡಿ ಕ್ಷಮೆ ಕೋರಿದ್ದೇನೆ. ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿನಿಂದನೆಯಲ್ಲ. ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧ ಎಸಗಿಲ್ಲ. ಸಮಾಜದಲ್ಲಿನ ತಾರತಮ್ಯದ ವಿರುದ್ಧ ನಾನು ಹೋರಾಡುತ್ತಿದ್ದೇನೆ’ ಎಂದು ಅರ್ಜಿಯಲ್ಲಿ ನಟ ಉಪೇಂದ್ರ ಉಲ್ಲೇಖಿಸಿದ್ಧಾರೆ. : –- – .